Latest

*ಅತಿ ಹೆಚ್ಚು ಮಳೆ ಮುನ್ಸೂಚನೆ; 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ರಾಜ್ಯದಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಶಿವಮೊಗ್ಗ ಜಿಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button