Kannada NewsKarnataka NewsLatest

*KSRTC ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಸಹ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾಳೆ. ಸಹಪ್ರಯಾಣಿಕರು ಆರೋಪಿ ಬಸ್ ನಿಂದ ಇಳಿಯದಂತೆ ತಡೆದಿದ್ದಾರೆ. ಅಲ್ಲದೇ ಬಸ್ಸನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಂತೆ ಪಟ್ಟು ಹಿಡಿದಿದ್ದಾರೆ.

ಚಾಲಕ ಬಸ್ ನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಕರೆತಂದಿದ್ದಾನೆ. ಪ್ರಯಾಣಿಕರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು 40 ವರ್ಷದ ಉದಯ್ ಎಂದು ಗುರುತಿಸಲಾಗಿದೆ. ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Related Articles

Back to top button