Latest

ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸದಿಂದಿರಿ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಎಸ್​ಎಸ್​ಎಲ್​​ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಶುಭಾಶಯಗಳು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಸಿಎಂ ಯಡಿಯೂರಪ್ಪ, ಇಂದು ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ನಿಮ್ಮ ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಧೈರ್ಯ ತುಂಬಿದ್ದಾರೆ.

Home add -Advt

ಇಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್​​ಸಿ ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್​​ಎಂಎಸ್​​​​ ಮೂಲಕ ಫಲಿತಾಂಶ ಬರಲಿದೆ. ಜತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟವಾಗಲಿದೆ.

ಈಗಾಗಲೇ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಧೈರ್ಯ ತುಂಬಿರುವ ಸಚಿವ ಸುರೇಶ್ ಕುಮಾರ್​​, ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ ಎಂದು ಪೋಷಕರಿಗೆ ತಿಳಿಸಿದ್ದಾರೆ.

Related Articles

Back to top button