Kannada NewsKarnataka NewsLatestPolitics

*ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಎಎನ್ ಟಿಎಫ್ ಅಧಿಕಾರಿಗಳ ದಾಳಿ ವೇಳೆ ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಮೂರು ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. 55 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ. 55 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಎಂಬುದು ಸುಳ್ಳು. 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿಇದರು.

ಮಹಾರಾಷ್ಟ್ರ ಪೊಲೀಸರ ಜೊತೆ ನಮ್ಮ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ದಾಳಿ ವೇಳೆ 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿದರು.

Related Articles

Back to top button