
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಸ್ಕ್ ಧರಿಸದಿದ್ದರೆ ವಿಧಿಸಲು ಉದ್ದೇಶಿಸಿದ್ದ ದಂಡದ ಪ್ರಮಾಣವನ್ನು ಕಡಿಮೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಸರಕಾರ ನಿರ್ಧರಿಸಿತ್ತು.
ಆದರೆ ಸಾರ್ವಜನಿಕರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ ನಗರ ಪ್ರದೇಶದಲ್ಲಿ 250 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡದ ಪ್ರಮಾಣ ನಿಗದಿಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಸುದ್ದಿಗಳನ್ನು ಓದಿ –
ಮಾಸ್ಕ್ ಹಾಕದೇ ಹೊರಗೆ ಹೋದರೆ ದಂಡ ಎಷ್ಟು ಗೊತ್ತಾ?; ಹೊಸ ರೂಲ್ಸ್ ಕೇಳಿದ್ರೆ ಶಾಕ್ ಆಗ್ತೀರಾ
ಬೆಳಗಾವಿಯಲ್ಲಿ ಬುಧವಾರದಿಂದ 1000 ರೂ. ದಂಡ




