*ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್*

ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್
ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಖಾನಾಪುರ ತಾಲೂಕಿನ ಪ್ರಭುನಗರ ಉನ್ನತೀಕರಿಸಿದ ಸರ್ಕಾರಿ ಶಾಲೆಯ ತರಬೇತಿ ಪದವೀಧರ ಶಿಕ್ಷಕಿ (ಟಿಜಿಟಿ) ಶುಭಾ ಹೆಗಡೆ ಅವರು 2026ನೇ ಸಾಲಿನ ಪ್ರತಿಷ್ಠಿತ ಬೇಲಾ ಟೀಚರ್ಸ್ ಅವಾರ್ಡ್ಗೆ ಆಯ್ಕೆಯಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡುತ್ತಿರುವ ಕೊಡುಗೆ ಹಾಗೂ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಯಲ್ಲಿ ವಹಿಸಿರುವ ಪಾತ್ರವನ್ನು ಪರಿಗಣಿಸಿ ಶುಭಾ ಹೆಗಡೆ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಳಗಾವಿಯ ಪ್ರತಿಷ್ಠಿತ ಬೇಲಾ ಸಂಸ್ಥೆ ವತಿಯಿಂದ ಪ್ರತಿವರ್ಷ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಸೆಪ್ಟೆಂಬರ್ 6ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶುಭಾ ಹೆಗಡೆ ಅವರಿಗೆ 2026ನೇ ಸಾಲಿನ ಬೇಲಾ ಟೀಚರ್ಸ್ ಅವಾರ್ಡ್ ಪ್ರದಾನ ಮಾಡಲಾಗುವುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




