Latest

ಮತ್ತೊಂದು ಸಿಡಿ ಪ್ರಕರಣ ಬಯಲು; ಶಾಸಕರ ಪುತ್ರನಿಗೆ ಯುವತಿ ಬ್ಲ್ಯಾಕ್ ಮೇಲ್

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಸಿಡಿ ಪ್ರಕರಣ ಬಹಿರಂಗವಾಗಿದೆ. ಅಶ್ಲೀಲ ವಿಡಿಯೋ ಇಟ್ಟುಕೊಂಡು ಮಾಜಿ ಶಾಸಕರ ಪುತ್ರನಿಗೆ ಯುವತಿಯೊಬ್ಬಳು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಧಾರವಾಡದ ಮಾಜಿ ಶಾಸಕರ ಪುತ್ರನಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಳು. ಹೀಗೆ ಮಾಡಿದ್ದ ವಿಡಿಯೋ ಕಾಲ್ ಗಳನ್ನೇ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ವಿಡಿಯೋ ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಳು.

ಇದರಿಂದ ಹೆದರಿದ ಮಾಜಿ ಶಾಸಕರ ಪುತ್ರ ಫೋನ್ ಫೇ ಮೂಲಕ 13 ಸಾವಿರ ರೂ ಹಣ ವರ್ಗಾವಣೆ ಮಾಡಿದ್ದ. ಬಳಿಕ ಯುವತಿ ಹಾಗೂ ಆಕೆಯ ಕಡೆಯವರು ಪದೇ ಪದೇ ಬ್ಲ್ಯಾಕ್ ಮೇಲ್ ಮಾಡಿ ಹಣ ಕೇಳಲಾರಂಭಿಸಿದ್ದರು. ಇದರಿಂದ ಬೇಸತ್ತ ಮಾಜಿ ಶಾಸಕರ ಪುತ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿ ಹಾಗೂ ಆಕೆ ಗ್ಯಾಂಗ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

Home add -Advt

Related Articles

Back to top button