Kannada NewsLatestNational
*ಖಾಸಗಿ ವಿಮಾನ ಪತನ: ಪವಾಡಸದೃಶ ರೀತಿಯಲ್ಲಿ ಬಚಾವಾದ ಪ್ರಯಾಣಿಕರು: ಪೈಲಟ್ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ವಿಮಾನವೊಂದು ಪತನಗೊಂಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆಯಲ್ಲಿ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ರೂರ್ಕೆಲಾದಿಂದ ಭುವನೇಶ್ವರಕ್ಕೆ ಹೊರಟಿದ್ದ ಖಾಸಗಿ ವಿಮಾನ ಇದಾಗಿದೆ. ವಿಮಾನದಲ್ಲಿ 7 ಜನರು ಇದ್ದರು. ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ರೂರ್ಕೆಲಾದಿಂದ ಹೊರಟ ವಿಮಾನ ಸುಮಾರು 9 ಕಿ.ಮೀ ದೂರ ಸಾಗುತ್ತಿದ್ದಂತೆಯೇ ಪತನಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗಾಯಳು ಪೈಲಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



