Kannada NewsKarnataka NewsLatest

*ಮತ್ತೊಂದು ಲವ್ ಜಿಹಾದ್: ವಿವಾಹಿತ ಹಿಂದೂ ಮಹಿಳೆಯೊಂದಿಗೆ ಪರಾರಿಯಾದ ವಿವಾಹಿತ ಮುಸ್ಲಿಂ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ವಿವಾಹಿತ ಹಿಂದೂ ಮಹಿಳೆ ಯೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕೆಲಗೇರಿಯ ಹಿಂದೂ ಮಹಿಳೆಯನ್ನು ಪಕ್ಕದ ಮನೆಯವನೇ ಆದ ವಿವಾಹಿತ ಮುಸ್ಲಿಂ ವ್ಯಕ್ತಿ ಮುನ್ನಾ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಹಿಳೆಯ ತಾಅಯಿ ಹುಬ್ಬಳ್ಳಿ-ಧಾರವಾಡ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.

ಧಾರವಾಡದ ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿ ಮುನ್ನಾ ಜೊತೆಗೆ ಓಡಿ ಹೋಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ಮಂಜುಳಾ ಕಣ್ಣಿರಿಟ್ಟಿದ್ದು, ತಮ್ಮ ಮಗಳಿಗೆ ಪರಿಚಿತ ಯುವಕನ ಜೊತೆ ವಿವಾಹವಾಗಿತ್ತು. ಆದರೆ ಮಗಳು ನಮ್ಮ ಜೊತೆಯೇ ಇದ್ದಳು. ಆಕೆಯ ಪತಿ ಆಗಾಗ ಬಂದು ಹೋಗುತ್ತಿದ್ದ. ಕೆಲಗೇರಿಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ, ತಮಗೆ ವಕೀಲರೊಬ್ಬರು ಪರಿಚಯವಿದ್ದರು. ಅವರ ಕಾರ್ ಡ್ರೈವರ್ ಆಗಿ ಮುನ್ನಾ ಎಂಬಾತ ಕೆಲಸ ಮಾಡ್ತಿದ್ದ. ಆಗ ನಾವು ನಮಗೆ ಸ್ವಂತದೊಂದು ಮನೆ ಬೇಕೆಂದು ಹೇಳಿ ಮನೆ ಹುಡುಕಿ ಕೊಡಿ ಎಂದು ಮುನ್ನಾ ಮತ್ತು ವಕೀಲರಿಗೆ ಹತ್ತು ಲಕ್ಷ ಹಣ ನೀಡಿದ್ದೆವು. ಆ ಬಳಿಕ ವಕೀಲರು ಮತ್ತು ಮುನ್ನಾ ಆಗಾಗ ಮನೆಗೆ ಬಂದು ಹೋಗಿ ಮಾಡುತ್ತಿದ್ದರು.

ಹೀಗೆ ಒಂದುದಿನ ನಾವ್ಯಾರೂ ಮನೆಯಲ್ಲಿ ಇಲ್ಲದಾಗ ಮುನ್ನಾ ಮನೆಗೆ ಬಂದು ತನ್ನ ಮಗಳನ್ನು ಪುಸಲಾಯಿಸಿ ಪರಾರಿಯಾಗಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದಾಳೆ. ದೂರು ನೀಡುದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Related Articles

Back to top button