Latest

ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ; ಶಾರುಖ್ ಖಾನ್ ಪುತ್ರ ಎನ್ ಸಿಬಿ ಬಲೆಗೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ನನ್ನು ವಶಕ್ಕೆ ಪಡೆದಿರುವ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಮುಂಬೈ ಸಮುದ್ರದ ಮಧ್ಯೆ ಐಷಾರಾಮಿ ಕ್ರೂಸರ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಲವು ಉದ್ಯಮಿಗಳ ಮಕ್ಕಳು, ಸೆಲೆಬ್ರಿಟಿಗಳ ಮಕ್ಕಳು ಡ್ರಗ್ಸ್ ಪಾರ್ಟಿಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ವೇಳೆ 10 ಜನರನ್ನು ವಶಕ್ಕೆ ಪಡೆಯಲಾಗಿದೆ.

ಎನ್ ಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ ಪಾರ್ಟಿಯಲ್ಲಿ ತೊಡಗಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ. ಪಾರ್ಟಿಯಲ್ಲಿ ಒಬ್ಬರಿಗೆ 80ರಿಂದ 2 ಲಕ್ಷ ರೂಪಾಯಿ ವರೆಗೆ ಟಿಕೆಟ್ ದರ ವಿಧಿಸಲಾಗಿತ್ತು.

ಪಾರ್ಟಿಯಲ್ಲಿ 600ಕ್ಕೂ ಹೆಚ್ಚು ಹೈ ಪ್ರೊಫೈಲ್ ವ್ಯಕ್ತಿಗಳು ಭಾಗಿಯಾಗಿದ್ದರು. ಕೊಕೇನ್, ಹಾಶಿಶ್ ಸೇರಿದಂತೆ ವಿವಿಧ ಮಾದರಿಯ ಡ್ರಗ್ಸ್ ಸರಬರಾಜು ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಲ್ಲದೇ ವಶಕ್ಕೆ ಪಡೆದಿದ್ದ 10 ಜನರು ಡ್ರಗ್ಸ್ ಸೇವಿಸಿದ್ದರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನೀಡಲು ಎನ್ ಸಿಬಿ ನಿರಾಕರಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಘಿ ಪ್ರಕರಣ; ಆರೋಗ್ಯ ಇಲಾಖೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button