Latest

ದೇಶದಲ್ಲಿ 10 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸವನ್ನು ಮೆರೆಯುತ್ತಿದ್ದು, ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದೆ. ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.

ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ.

Home add -Advt

ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೆ ದೇಶದಲ್ಲಿ ಒಟ್ಟು 25,602 ಮಂದಿ ಮಹಾಮಾರಿ ಕೋವಿಡ್ 19ಗೆ ಬಲಿಯಾಗಿದ್ದಾರೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Related Articles

Back to top button