
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಹಾಸನ ನಗರದ ವಿಶ್ವಕರ್ಮ ವೃತ್ತದಲ್ಲಿ ಈ ದುರಂತ ಸಂಭವಿಸಿದೆ. ಸ್ಕೂಟಿ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲಿಖಿತಾ (18) ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ಚಿನ್ಮಯಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಿಖಿತಾ ತನ್ನ ಗೆಳತಿ ಸ್ಕೂಟಿಯಲ್ಲಿ ಸಿಟಿಗೆ ತೆರಳಿದ್ದರು. ಹಾಸನದ ಬಸ್ ನಿಲ್ದಾಣ ಕಡೆಯಿಂದ ಡೈರಿ ಕಡೆಗೆ ಸ್ಕೂಟರ್ ತಿರುಗಿಸಿದ್ದಾರೆ. ಈ ವೇಳೆ ಅತಿ ವೇಗವಾಗಿ ಬಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾಅತದಲ್ಲಿ ಲಿಖಿತಾ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಓಡಿಸುತ್ತಿದ್ದ ಎನ್ನಲಾಗಿದೆ. ಸ್ಥಳೀಯರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ನಗರದ ಒಳಗೆ ಭಾರಿ ಪ್ರಮಾಣದ ಲಾರಿಯನ್ನು ಹೇಗೆ ಬಿಟ್ಟಿರಿ. ಟ್ರಾಫಿಕ್ ಸಿಗ್ನಲ್ ಇಲ್ಲ ಎಂದು ಪೊಲೀಸರ ವಿರುದ್ಧವೂ ಕಿಡಿಕಾರಿದ್ದಾರೆ. ಲಾರಿ ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



