Kannada NewsKarnataka NewsLatestPolitics

*ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜಿನಾಮೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 2.30ಕ್ಕೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಮುಖ್ಯಮಂತ್ರಿಗಳು 2.30ಕ್ಕೆ ರಾಜಭವನಕ್ಕೆ ತೆರಳಲಿದ್ದು, ಬಳಿಕ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ರಾಜಿನಾಮೆ ನಂತರ ಕಾಂಗ್ರೆಸ್ ಶಾಸಕಾಂಗ ಸಭೆಗೆ ಮುಹೂರ್ತ ನಿಗಧಿಯಾಗಲಿದೆ. ಶುಕ್ರವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದ್ದು, ಅಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ. ಸಿದ್ದರಾಮಯ್ಯ ಅವರೇ ನೂತನ ನಾಯಕನ ಘೋಷಣೆ ಮಾಡುವ ಸಾಧ್ಯತೆ ಇದೆ.

ಸೋಮವಾರ ಡಿ.ಕೆ.ಶಿವಕುಮಾರ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಅವರ ಹೊಸ ಮಂತ್ರಿ ಮಂಡಳ ಕೂಡ ಅಂದೇ ಅಧಿಕಾರ ಪದಗ್ರಹಣ ಮಾಡಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button