Kannada NewsKarnataka NewsLatest

*ಸಿಎಂ ಕಾರ್ಯದರ್ಶಿ ಪಿಎ ಹೆಸರಲ್ಲಿ ಮಹಿಳಾ ಅಧಿಕಾರಿಗಳ ಮಾಹಿತಿ ಸಂಗ್ರಹ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯ ಪಿಎ ಹಾಗೂ ಕಂದಾಯ ಸಚಿವರ ಪಿಎ ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ವಿಧನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ. ತಾನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಪಿಎ, ಕಂದಾಯ ಸಚಿವರ ಪಿಎ ಎಂದು ಹೇಳಿಕೊಂಡು, ಡಿಜಿ, ಕಮಿಷ್ನರ್ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿ ಕಂದಾಯ ಇಲಾಖೆಯಲ್ಲಿದ್ದ ಮಹಿಳಾ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದ ಎನ್ನಲಾಗಿದೆ.

Home add -Advt

ಅಧಿಕಾರಿಯೊಬ್ಬರು ಈ ಬಗ್ಗೆ ಅನುಮಾನಗೊಂಡು ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವಿಕ್ರಂ ಗೋಪಾಲಸ್ವಾಮಿಯನ್ನು ನಿವೃತ್ತ ಅಧಿಕಾರಿಯೊಬ್ಬರ ಮಗ ಎಂದು ತಿಳಿದುಬಂದಿದ್ದು, ತನಿಖೆ ಮುಂದುವರೆದಿದೆ.

Related Articles

Back to top button