Latest

*ನಮಗೆ ಅಂತಹ ದೊಡ್ದ ನಾಯಕರ ಅವಶ್ಯಕತೆ ಇಲ್ಲ ಎಂದ ಮಾಜಿ ಸಿಎಂ HDK*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನತ್ತ ಮುಖ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಜಗದೀಶ್ ಶೆಟ್ಟರ್ ರಾಜೀನಾಮೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಜೆಡಿಎಸ್ ಸೇರುವ ಸಾಧ್ಯತೆ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ. ನಮಗೆ ಅಂತಹ ದೊಡ್ಡ ನಾಯಕರ ಅವಶ್ಯಕತೆ ಇಲ್ಲ ಎಂದಿದ್ದಾರೆ.

Home add -Advt

ಸಣ್ಣವರು ಯಾರಾದರೂ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ದೊಡ್ಡ ನಾಯಕರ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ಹೇಳಿದರು.


https://pragati.taskdun.com/jagadeesh-shettarresignbjp/

Related Articles

Back to top button