
ಪ್ರಗತಿವಾಹಿನಿ ಸುದ್ದಿ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ನಡೆದಿದೆ.
ಬೆಳಿಗ್ಗೆ ಕಾರ್ಖಾನೆಯ ಬಾಯ್ಲರ್ ಏಕಾಏಕಿ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಕಾರ್ಮಿಕರು ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಕಾರ್ಮಿಕರು ಬೆಳಿಗ್ಗೆ ಟೀ ಕುಡಿಯಲೆಂದು ತೆರಳಿದ್ದ ವೇಳೆ ಕಾರ್ಖಾನೆ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಕಳೆದ ವರ್ಷ ಕೂಡ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟಗೊಂಡಿತ್ತು. ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದರು.