Latest

ಮುರುಘಾಶ್ರೀಗಳು ಮತ್ತೆ ಪೊಲೀಸ್ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.

ಚಿತ್ರದುರ್ಗದ ಮುರುಘಾಶರಣರ ವಿರುದ್ಧ 2ನೇ ಪೋಕ್ಸೋ ಪ್ರಕರನ ದಾಖಲಾಗಿತ್ತು. ಮಠದ ಅಡುಗೆ ಸಹಾಯಕಿ ತನ್ನ ಇಬ್ಬರು ಮಕ್ಕಳು ಸೇರಿ ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಮುರುಘಾಶ್ರೀಗಳ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು.

Home add -Advt

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುರುಘಾಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಚಿತ್ರದುರ್ಗ ಪೊಲೀಸರು ಶ್ರೀಗಳನ್ನು ಹೆಚ್ಚಿನ ವಿಚಾರಣೆಗಾಗಿ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಇದೀಗ ಕೋರ್ಟ್ ಮುರುಘಾಶ್ರೀಗಳನ್ನು ನ.5ರವರೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

ಮುರುಘಾಶ್ರೀಗಳನ್ನು ಕಸ್ಟಡಿಗೆ ಪಡೆದ ಪೊಲೀಸರು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಮಕ್ಕಳು ಬಲಿ

 

https://pragati.taskdun.com/latest/tumakuruwomantwins-babys-death/

Related Articles

Back to top button