Kannada NewsKarnataka NewsLatest

*ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾದಿಯಾ (19) ಹಾಗೂ ನಾಗೇಂದ್ರ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಪಾಲಾರ್ ಗ್ರಾಮದ ನಾದಿಯಾಳನ್ನು ನಾಗೇಂದ್ರ ಪ್ರೀತಿಸುತ್ತಿದ್ದ. ಇಬ್ಬರ ಮದುವೆಗೆ ಪೋಷಕರು ಒಪ್ಪಿರಲಿಲ್ಲ. ಮೂರು ದಿನಗಳ ಹಿಂದೆ ನಾಗೇಂದ್ರ ನಾದಿಯಾಳನ್ನು ತನ್ನ ತಾತನ ಮನೆಯಾದ ಪೊನ್ನಾಚಿ ಗ್ರಾಮಕ್ಕೆ ಕರೆತಂದಿದ್ದ. ಅತ್ತ ನಾದಿಯಾ ತಂದೆ ಮಹದೇವ ನಾಪತ್ತೆ ದೂರು ದಾಖಲಿಸಿದ್ದರು.

ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಇತ್ತ ತಾತನ ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾದಿಯಾ ಹಾಗೂ ನಾಗೇಂದ್ರ ನೋಣಿಗೆ ಕೊರಳೊಡ್ಡಿದ್ದಾರೆ. ಘಟನ ಅಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button