CrimeKannada NewsKarnataka NewsLatest

*ಬೆಳ್ಳಂ ಬೆಳಗ್ಗೆ ಜವರಾಯನ ಅಟ್ಟಹಾಸ: ಸರಣಿ ಅಪಘಾತದಲ್ಲಿ ಏಳು ಜನ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ಹೊಸಕೋಟೆ  ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿ ಒಂದೆ ಕುಟುಂಬದ ಆರು ಜನ ಸೇರಿ 7 ಪ್ರಯಾಣಿಕರು ಸಾವನಪ್ಪಿರುವ ಘಟನೆ ನಡೆದಿದೆ.

ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾದಿಂದ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button