LatestUncategorized

*ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು.

Home add -Advt

ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಜೊತೆಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಾಕು ಮಗ ಬಳ್ಳೂರು ಉಮೇಶ್ ಇದ್ದರು.

https://pragati.taskdun.com/d-k-shivakumarreactionm-b-patil/


Related Articles

Back to top button