Latest

ಮಿಸ್ಟರ್ ಕೊಪ್ಪ; ಜಿಮ್ ನಲ್ಲೇ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಜಿಮ್ ಟ್ರೈನರ್ ಓರ್ವರು ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

ಮೃತನನ್ನ ಜಯಪುರ ಸಮೀಪದ ದೂಬ್ಳ ಗ್ರಾಮದ 26 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದೇಹದಾಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದ ಸುನೀಲ್, ಕಳೆದ ವರ್ಷ ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಮಿಸ್ಟರ್ ಕೊಪ್ಪ ಎಂಬ ಕೀರ್ತಿಗೂ ಪಾತ್ರನಾಗಿದ್ದನು.

Home add -Advt

ಮೃತ ಸುನಿಲ್ ಜಯಪುರದಲ್ಲಿ ಜಿಮ್ ಇಟ್ಟುಕೊಂಡು, 30 ರಿಂದ 40 ಜನ ಯುವಕರಿಗೆ ಜಿಮ್ ಬಗ್ಗೆ ಟ್ರೈನಿಂಗ್ ಕೊಡುತ್ತಿದ್ದ. ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಲಾಕ್ ಡೌನ್ ನಿಂದಾಗಿ ಜಿಮ್ ಮುಚ್ಚಲಾಗಿದೆ. ಸುನೀಲ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಎನ್ನಲಾಗಿದೆ.

ಅಷ್ಟೇ ಅಲ್ಲದೇ ಆರ್ಥಿಕ ಪರಿಸ್ಥಿತಿಯನ್ನ ಸುಧಾರಿಸಲು ಜಿಮ್ ಟ್ರೈನರ್ ಸುನಿಲ್ ಕಳೆದ ಮೂರು ತಿಂಗಳಿಂದ ಆಟೋ ಓಡಿಸುತ್ತಿದ್ದ. ಆರ್ಥಿಕ ಸಂಕಷ್ಟದಿಂದ ಮಾನಸಿಕವಾಗಿ ಕುಗ್ಗಿದ್ದ ಸುನೀಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

Related Articles

Back to top button