Latest

*ಇಂದಿನಿಂದ 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದಿನಿಂದ ಎರಡು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ರೋಡ್ ಶೋ ಮೂಲಕವಾಗಿ ಕಾರ್ಯಕಾರಿಣಿ ಸಭೆಗೆ ಆಗಮಿಸಲಿದ್ದಾರೆ.

ದೆಹಲಿಯ ಎನ್ ಡಿ ಎಂಸಿ ಕನ್ವೆನ್ಶನ್ ಸೆಂಟರ್ ನಲ್ಲಿ ಸಂಜೆ 4 ಗಂಟೆಗೆ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಈ ವರ್ಷ ನಡೆಯಲಿರುವ 9 ರಾಜ್ಯಗಳ ವಿಧಾನಸಭಾ ಚುನಾವಣೆ, 2024ರ ಸಾರ್ವತ್ರಿಕ ಚುನಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಯಲಿದೆ.

Home add -Advt

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದು, ಕಾರ್ಯಕಾರುಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಕಾರ್ಯಕಾರಿಣಿ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

*ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರ ನಿವಾಸದ ಮೇಲೆ IT ದಾಳಿ*

https://pragati.taskdun.com/kpcc-kisan-cellakmalit-raidchikkamagaluru/

Related Articles

Back to top button