Kannada NewsLatestPolitics

*79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. 

ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಮೋದಿ ನಮನ ಸಲ್ಲಿಸಿದರು. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು.

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button