ಪ್ರಗತಿವಾಹಿನಿ ಸುದ್ದಿ, ಕಾರವಾರ:
ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾದ ವ್ಯಕ್ತಿಯೊಬ್ಬನನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಅವರು ತಮ್ಮ ವಾಹನದಲ್ಲಿಯೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಸೋಮವಾರ ಸಾಯಂಕಾಲ ಇಲ್ಲಿನ ಜಿಲ್ಲಾ ಪತ್ರಿಕಾ ಭವನದ ಎದುರು ಬೈಕ್ ನಲ್ಲಿ ಸಾಗುತ್ತಿದ್ದ ಚಂದ್ರಕಾಂತ್ ಭಜಂತ್ರಿ ಬೈಕ್ ಸ್ಕಿಡ್ ಆಗಿ ಬಿದ್ದು ನರಳಾಡುತ್ತಿದ್ದರು. ತಕ್ಷಣ ಜಮಾವಣೆಗೊಂಡ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು 108 ಅಂಬುಲೆನ್ಸ್ ಗೆ ಕರೆಮಾಡಿದ್ದರು. ಆಗ ಅದೇ ರಸ್ತೆಯಲ್ಲಿ ಸಾಗುತಿದ್ದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಗಾಯಾಳುವಿನ ಪರಿಸ್ಥಿತಿ ಕಂಡು 108 ಅಂಬ್ಯುಲೆನ್ಸ್ ಗಾಗಿ ಕಾಯದೇ ತಮ್ಮ ವಾಹನದಲ್ಲೀಯೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದರು.

ರಸ್ತೆ ಅಪಘಾತಕ್ಕಿಡಾದ ವ್ಯಕ್ತಿಯ ಪ್ರಥಮ ಚಿಕಿತ್ಸೆಗಾಗಿ ತಕ್ಷಣ ಸ್ಪಂದಿಸಿದ ಎಸ್.ಪಿ ಯವರ ಕಾರ್ಯ ಸಾರ್ವಜನಿಕರಿಗೆ ಮಾದರಿಯಾಗಿದೆ.