Kannada NewsLatest

ಬೆಳಗಾವಿ: ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಅರಣ್ಯ ಸಿಬ್ಬಂದಿಗಳ ಮೇಲೆಯೇ ಕಾಡುಕೋಣಗಳು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ ನಡೆದಿದೆ.

ಕೆಂಪಟ್ಟಿ ಗ್ರಾಮದ ಹೊರವಲಯದಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು, ಅರಣ್ಯ ಸಿಬ್ಬಂದಿ ಸೇರಿ ಇಬ್ಬರ ಮೇಲೆ ದಾಳಿ ನಡೆಸಿವೆ.

Home add -Advt

ಅರಣ್ಯ ಸಿಬ್ಬಂದಿ ಕೃಷ್ಣ ಗುರವ್ ಹಾಗೂ ಸ್ಥಳೀಯ ವ್ಯಕ್ತಿ ಚಿದಾನಂದ ನಾಯಕ ಕಾಡಾನೆ ದಾಳಿಯಿಂದ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ರಾಯಭಾಗ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮತ್ತೊಂದು ಅಕ್ರಮ ಬಯಲು; ಹೂಕುಂಡದಲ್ಲಿ ಬ್ಲೂಟೂತ್ ಇಟ್ಟು ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿ

Related Articles

Back to top button