Kannada NewsKarnataka NewsLatestPolitics

*ಲೋಕಸಭಾ ಚುನಾವಣೆ: ಮಾಜಿ ಸಿಎಂ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಇಂದು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಕೆ ಮಡಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Home add -Advt

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಕುಮಾರಸ್ವಾಮಿ, ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿದರು. ಮಂಡ್ಯದ ಗುತ್ತಲುನಲ್ಲಿರುವ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನೂರಾರು ಕಾರ್ಯಕರ್ತರು, ಬೆಂಬಲಿಗರ ಜೊತೆ ಸೇರಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲಾದವರು ಉಪಸ್ಥಿತರಿದ್ದರು.


Related Articles

Back to top button