
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಚುನಾವಣಾ ಆಯೋಗ, ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟಿನ ಕ್ರಮಗಳನ್ನು ಕೈಗೊಂಡಿದೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹಣ, ಇತರೆ ಆಮಿಷಗಳಿಗೆ ಮತದಾರರು ಒಳಗಾಗಬಾರದು. ಚುನಾವಣಾ ಅಕ್ರಮ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತ ಮತದಾನ ನಡೆಯುವ ವಿಶ್ವಾಸವಿದೆ ಎಂದರು.
ಪ್ರತಿ ಬ್ಯಾಂಕ್ ವ್ಯವಹಾರಗಳ ಮೇಲೂ ಗಮನವಹಿಸುತ್ತೇವೆ. ಗಡಿ, ಕರಾವಳಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು. ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಅಕ್ರಮ ಹಣ, ಮದ್ಯ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುವುದು. ಇವಿಎಂಗಳಿಗೂ ಮೂರು ಸುತ್ತಿನ ಭದ್ರತೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಇನ್ನು ಅಭ್ಯರ್ಥಿಗಳು ಸುವಿಧಾ ಮೂಲಕ ನಾಮಪತ್ರ ಸಲ್ಲಿಸಬಹುದು. ಅಪರಾಧ ಪ್ರಕರಣಗಳಿದ್ದರೆ ಮೂರು ಬೇರೆ ಬೇರೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೇಪರ್ ಕಟ್ಟಿಂಗ್ ಕೂಡ ಅಪ್ ಲೋಡ್ ಮಾಡಬೇಕು ಎಂದು ತಿಳಿಸಿದರು.