Kannada NewsLatest

ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಸೋಂಕಿನಿಂದ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ರಮೇಶ್ ಜಾರಕಿಹೊಳಿಯವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಸಧ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಡಾ.ರವೀಂದ್ರ ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ರಮೇಶ್ ಜಾರಕಿಹೊಳಿ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಹೋಂ ಕ್ವಾರಂಟೈನ್ ಆಗಲಿದ್ದಾರೆ ಎಂದು ತಿಳಿಸಿದರು.

Related Articles

Back to top button