Latest

ಕಾಂಗ್ರೆಸ್ ಮುಖಂಡನ ಹತ್ಯೆ; ಐವರ ಬಂಧನ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡನನ್ನು ನಡುರಸ್ತೆಯಲ್ಲೇ ಹತ್ಯೆಗೈದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಬಂಧಿತರನ್ನು ಕಲಂದರ್, ಅಮಿತ್, ರಾಘವೇಂದ್ರ, ಶ್ರೀನಾಥ್ ಹಾಗೂ ಅಕ್ಷಯ್ ಎಂದು ಗುರುತಿಸಲಾಗಿದೆ.

Home add -Advt

ಕಾಂಗ್ರೆಸ್ ಮುಖಂಡ ಅಮ್ಜದ್ ಎಂಬುವವರನ್ನು ನಿನ್ನೆ ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಓಮ್ನಿಯಲ್ಲಿ ಬಂದ ದುಷ್ಕರ್ಮಿಗಳು ಬೈಕ್ ನಲ್ಲಿ ಸಾಗುತ್ತಿದ್ದ ಅಮ್ಜದ್ ಅವರಿಗೆ ಡಿಕ್ಕಿಹೊಡೆದು, ಅವರನ್ನು ಬೀಳಿಸಿ ಬಳಿಕ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದರು.

ಶಿಡ್ಲಘಟ್ಟ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು. ಇದೀಗ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button