Belagavi NewsBelgaum NewsKarnataka NewsLatest

*ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ: ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ ತೀವ್ರ ಸಂತಾಪ ಸೂಚಿಸಿದ್ದಾರೆ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯ ಬಳಿ ತೆರಳಿ, ಶ್ರೀಗಳ ಪಾರ್ಥಿವ ಶರೀರದ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು.

ಪೂಜ್ಯರ ಅಗಲಿಕೆ ಭಕ್ತ ಸಮೂಹಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ. ಅವರ ಧಾರ್ಮಿಕ–ಸಾಮಾಜಿಕ ಸೇವೆಗಳು ಸದಾ ಸ್ಮರಣೀಯ. ಭಗವಂತ ಶ್ರೀಗಳ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಭಕ್ತರಿಗೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button