Latest

ಅಶ್ಲೀಲ ವಿಡಿಯೋ ಪ್ರಕರಣ; ಖ್ಯಾತ ನಟಿಯರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು 450 ಪುಟಗಳ ಚಾರ್ಜ್ ಶೀಟ್ ಸಲಿಕೆ ಮಾಡಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ಬಾಲಿವುಡ್ ನಟಿಯರಾದ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ, ರಾಜ್ ಕುಂದ್ರಾ ಸೇರಿದಂತೆ ಹಲವರ ಹೆಸರು ಉಲ್ಲೇಖಿಸಲಾಗಿದೆ. ಮುಂಬೈನ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ರಾಜ್ ಕುಂದ್ರಾ ನೀಲಿ ಚಿತ್ರಗಳ ಚಿತ್ರೀಕರಣ ಮಾಡುತ್ತಿದ್ದರು ಎನ್ನಲಾಗಿದೆ.

ಪೂನಂ ಪಾಂಡೆ, ಶೆರ್ಲಿನ್ ಚೋಪ್ರಾ ಸೇರಿದಂತೆ ಕೆಲ ನಟಿಯರು ತಮ್ಮದೇ ಹೆಸರಲ್ಲಿ ಅಪ್ಲಿಕೇಷನ್ ತೆರೆದು ಅವುಗಳ ಮೂಲಕ ತಮ್ಮದೇ ಅಶ್ಲೀಲ ವಿಡಿಯೋಗಳನ್ನು ಹಣಕ್ಕಾಗಿ ಮಾರುತ್ತಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಚಾರ್ಜ್ ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ನಟಿಯರಿಗೆ ನಡುಕ ಶುರುವಾಗಿದೆ.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ನಟಿ ಶೆರ್ಲಿನ್ ಚೋಪ್ರಾ, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅನಗತ್ಯವಾಗಿ ನನ್ನ ಹೆಸರು ಎಳೆದು ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಈಗಾಗಲೇ ಜೈಲುವಾಸ ಅನುಭವಿಸಿದ್ದ ಅರಜ್ ಕುಂದ್ರಾ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಒಂದು ವರ್ಷಗಳಿಂದ ಮುಖ ಮುಚ್ಚಿಕೊಂಡೇ ಓಡಾಡುತ್ತಿದ್ದಾರೆ. ಚಾರ್ಜ್ ಶೀಟ್ ಬೆನ್ನಲ್ಲೇ ರಾಜ್ ಕುಂದ್ರಾ ಮತ್ತೆ ಅರೆಸ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ; ತಾಯಿ-ಮಗು ಗಂಭೀರ

https://pragati.taskdun.com/cm-basavaraj-bommaiescort-vehicleaccidenthiriyuruchitradurga/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button