Kannada NewsLatestNationalPolitics

*ಲೋಕಸಭೆಯಿಂದ ವಿಪಕ್ಷಗಳ 31 ಸಂಸದರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿಪಕ್ಷಗಳ 31 ಸಂಸದರನ್ನು ಅಮಾನತುಗೊಳಿಸಲಾಗಿದೆ.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸೇರಿದಂತೆ 31 ಸಂಸದರನ್ನು ಸಂಸತ್ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕಳೆದ ವಾರ ವಿಪಕ್ಷಗಳ 14 ಸಂಸದರನ್ನು ಸಂಸತ್ ಕಲಾಪದಿಂದ ಸಸ್ಪೆಂದ್ ಮಾಡಲಾಗಿತ್ತು. ಈ ಮೂಲಕ ಸಂಸತ್ ಕಲಾಪದಿಂದ ಈವರೆಗೆ ವಿಪಕ್ಷಗಳ 47 ಸಂಸದರನ್ನು ಅಮಾನತು ಮಾಡಲಾಗಿದೆ.


Related Articles

Back to top button