*ಬಿಡಿಸಿಸಿ ಬ್ಯಾಂಕ್ನ ಹೊಸ ಯೋಜನೆಗಳ ಉದ್ಘಾಟನೆ ನಾಳೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಿಂದ ಕೊಡಲು ಉದ್ದೇಶಿಸಿರುವ ಹೊಸ ಯೋಜನೆಗಳ ಉದ್ಘಾಟನಾ ಸಮಾರಂಭ ಫೆ. 18 ಸಂಜೆ 4 ಕ್ಕೆ ನಗರದ ಸಿಪಿಇಡಿ ಮೈದಾನದಲ್ಲಿ ನಡೆಯಲಿದೆ.
ಬೆಳಗಾವಿ ಜಿಲ್ಲೆಯ ಎಲ್ಲ ಪಿಕೆಪಿಎಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಾಲ, ವಿಮೆಗೆ ಸಂಬಂಧಿಸಿದ ಮೂರು ನೂತನ ಯೋಜನೆಗಳ ಘೋಷಣೆ ಈ ಕಾರ್ಯಕ್ರಮದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಮುಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ವಹಿಸಲಿದ್ದಾರೆ. ಉಪಾಧ್ಯಕ್ಷ ರಾಜು ಕಾಗೆ ಸೇರಿದಂತೆ ಎಲ್ಲ ನಿರ್ದೇಶಕರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ ಎಂದು ಬ್ಯಾಂಕ್ನ ಸಿಇಒ ಎನ್.ಜಿ. ಕಲಾವಂತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



