Latest

ಕೋಲಾರ ಜಿಲ್ಲೆಯ ಹಲವರು ಬಿಜೆಪಿ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮಾಜಿ ಮಂತ್ರಿ ದಿವಂಗತ ಟಿ.ಚೆನ್ನಯ್ಯ ಅವರ ಮಗ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಾಲಾಜಿ ಚೆನ್ನಯ್ಯ, ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ, ಮುಳಬಾಗಿಲು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರಭಾಕರಾಚಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎ‌ಂ.ಅಶೋಕ್, ಶ್ರೀನಿವಾಸಪುರ ತಾಲೂಕು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಾಲಾಜಿ ಸೇರಿದಂತೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್ ಮುಖಂಡರು ಇಂದು ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬಿ.ಎಸ್.ಯಡಿಯೂರಪ್ಪ ಪಕ್ಷದ ಶಾಲು ಹೊದಿಸಿ ಮುಖಂಡರನ್ನು ಬಿಜೆಪಿಗೆ ಬರ ಮಾಡಿಕೊಂಡರು.
 ಚಿ.ನಾ.ರಾಮು, ಚಲವಾದಿ ನಾರಾಯಣ ಸ್ವಾಮಿ, ಶಾಸಕ ವೈ.ಎ.ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಎನ್.ರವಿಕುಮಾರ್ ಅವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button