Latest

ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲಬಾರಿಗೆ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿಗಳ ಆಶೀರ್ವಾದ ಪಡೆದರು. ಬಳಿಕ ಕೆಲ ಕಾಲ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.

Home add -Advt

ಭೇಟಿ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಜನತಾಪರಿವಾರದಲ್ಲಿದ್ದಾಗಿನ ಒಡನಾಟವನ್ನು ಮೆಲುಕು ಹಾಕಿದೆವು. ಸಿಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸಿ, ರಾಜ್ಯಕ್ಕೆ ಉತ್ತಮ ಆಡಳಿತ ನೀಡುವಂತೆ ದೇವೇಗೌಡರು ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು.

ಸಿಎಂ ನಿವಾಸಕ್ಕೆ ಸಚಿವಾಕಾಂಕ್ಷಿಗಳು ದೌಡು

Related Articles

Back to top button