Belagavi NewsBelgaum NewsKannada NewsKarnataka NewsNationalPolitics

*ಪೇವರ್ಸ್ ಕಾಮಗಾರಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ :  2023-24 ನೇ ಸಾಲಿನ ಜಿಲ್ಲಾ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸವದತ್ತಿ ಪಟ್ಟಣದ ಪುನರ್ವಸತಿ ಕೇಂದ್ರವಾದ ಗುರ್ಲಹೊಸೂರಿನ ಶ್ರೀ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಪೇವರ್ಸ್ ಅಳವಡಿಕೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಶಿವಾನಂದ ಪಟ್ಟಣಶೆಟ್ಟಿ, ಮಹಾಂತೇಶ ಪಂಪನವರ್, ನಿಂಗಪ್ಪ ಹಾದಿಮನಿ, ಮನೋಜ ಮಠಪತಿ, ಚಿದಂಬರ್ ತಾರಿಹಾಳ, ಸಂಜು ಪವಾರ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button