Belagavi NewsBelgaum NewsKannada NewsKarnataka NewsLatestPolitics

*ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿಯ ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಬಿಜೆಪಿಯಲ್ಲಿ ಒಂದು ಪದ್ಧತಿ ಇದೆ ಅದರಂತೆ ವಿಪಕ್ಷ ನಾಯಕನನ್ನು ಸೂಕ್ತ ಸಮಯದಲ್ಲಿ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Home add -Advt

ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗುವ ಮೊದಲು ಎಐಸಿಸಿ ಅಧ್ಯಕ್ಷ ಸ್ಥಾನ ಹಲವು ದಿನಗಳ ಕಾಲ ಖಾಲಿ ಇತ್ತು. ಗುಂಡೂರಾವ್ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆರು ತಿಂಗಳುವರೆಗೆ ಖಾಲಿ ಇತ್ತು. ಆಗ ಯಾಕೆ ಕಾಂಗ್ರೆಸ್ ಮಾತನಾಡಲಿಲ್ಲ? ಈಗ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

Related Articles

Back to top button