Kannada NewsKarnataka NewsLatestPolitics

*ಮತ್ತೊಂದು ಬೈಕ್ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳ ನಡುವೆ ಸಂಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿಯಲ್ಲಿ ನಡೆದಿದೆ.

ಅಪಘಾತದಲ್ಲಿ ತಾಯಿ ಮಗ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಹನುಮವ್ವ ಬಸಪ್ಪ ಕಠಾಣಿ (೬೩), ಕೆಂಚಪ್ಪ ಬಸಪ್ಪ ಕಠಾಣಿ (೩೨) ಮೃತರು. ಮೃತರು ಮದುವೆ ಸಮಾರಂಭಕ್ಕೆಂದು ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

Home add -Advt

ಮೂವರು ಗಾಯಾಳುಗಳನ್ನು ಮುಧೋಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button