Belagavi NewsBelgaum NewsKannada NewsKarnataka News

*29ರ ವರೆಗೆ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Home add -Advt

ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹಾಗೆಯೇ ಇಂದಿನಿಂದ ಜೂ.29ರವರೆಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button