Kannada NewsKarnataka NewsLatest

*ಉತ್ತರ ಒಳನಾಡಿನ ಈ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರ್ಗಿ, ವಿಜಯಪುರ ಸೇರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಇನ್ನು ಕರಾವಳಿ ಜಿಲ್ಲೆಗಳು ಹಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಯಾದಗಿರಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಕೆಲವೆಡೆ ಮಳೆಯಾಗಲಿದೆ.


Related Articles

Back to top button