Latest

ಡಿ.ಕೆ.ಶಿವಕುಮಾರ್ ಗೆ ಮತ್ತೆ EDಯಿಂದ ಸಮನ್ಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ತಿಳಿಸಿರುವ ಡಿ.ಕೆ.ಶಿವಕುಮಾರ್ ಇಡಿ ಸಮನ್ಸ್ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಷತ್ ನಲ್ಲಿ ಮಂಡನೆಯಾದ ಮತಾಂತರ ನಿಷೇಧ ಕಾಯ್ದೆ

https://pragati.taskdun.com/politics/https-pragativahini-com-politics-basanagouda-patil-yatnalb-s-yedyurapparesign/

Home add -Advt

Related Articles

Back to top button