CrimeKannada NewsNational

*ಬಾಯ್ ಫ್ರೆಂಡ್ ಕಿರುಕುಳಕ್ಕೆ ವೈದ್ಯಕೀಯ ವಿದ್ಯಾರ್ಥಿನಿ ಸೂಸೈಡ್*

ಪ್ರಗತಿವಾಹಿನಿ ಸುದ್ದಿ: ಬಾಯ್ ಫ್ರೆಂಡ್ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.

ಈ ಘಟನೆ ಮುಂಬೈಯನಲ್ಲಿ ನಡೆದಿದೆ.‌ ಮೃತ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಮುಂಬೈಯ ಆಂಟೋಪ್ ಹಿಲ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ವಿಮಾ ಏಜೆಂಟ್ ಆಗಿರುವ ಫಜಲ್ ಮೊಹಮ್ಮದ್ ಖಾನ್ ಹೆಸರು ಕೇಳಿಬಂದಿದ್ದು ಆತನನ್ನು ಬಂಧಿಸಲಾಗಿದೆ.

ತನ್ನ ಆರು ಪುಟಗಳ ಡೆತ್ ನೋಟ್ ನಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button