Kannada NewsKarnataka NewsLatest

*BREAKING: ಮೈಸೂರಿನ ಕೋರ್ಟ್ ಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಶಾಲೆಗಳು, ಹೋಟೆಲ್ ಗಳು, ವಿಮಾನ ನಿಲ್ದಾಣಗಳ ಬಳಿಕ ಈಗ ಕೋರ್ಟ್ ಗಳಿಗೂ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಮೈಸೂರಿನ ಹಳೇ ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಮೈಸೂರಿನ ಹಳೇ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಆತಂಕಗೊಂಡ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಕೋರ್ಟ್ ಆವರಣದಿಂದ ಹೊರ ಬಂದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪರಿಶೀಲನೆ ನಡೆಸಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button