Kannada NewsKarnataka NewsLatest

*ರಣ ಬಿಸಿಲಿಗೆ ಜನರು ಹೈರಾಣು: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿಗರು ಬಿಸಿಲ ಝಳಕ್ಕೆ ಕಂಗೆಟ್ಟು ಹೋಗುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದ್ದು, ಹೀಟ್ ಸ್ಟ್ರೋಕ್ ಎಚ್ಚರಿಕೆ ನೀಡಲಾಗಿದೆ.

ಬಿಸಿಲ ಝಳಕ್ಕೆ ಜನರು ಅನಾರೋಗ್ಯಕ್ಕೀಡಾಗುತ್ತಿದ್ದು, ಡಿಹೈಡ್ರೇಶನ್, ಅತಿಸಾರ, ಬೇಧಿ, ಜ್ವರದಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೋಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

Home add -Advt

ಮತ್ತೊಂದೆಡೆ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ.ಶಿವಮೊಗ್ಗ, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.

Related Articles

Back to top button