Latest

ರಾಜ್ಯ ಸರ್ಕಾರದ ಕ್ರಮ ಹುಚ್ಚರ ಸಂತೆಯಲ್ಲಿನ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಜಾರಿಗೆ ತಂದಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ.

ಸಾರ್ವಜನಿಕರು ಹಾಗೂ ವಿಪಕ್ಷ ನಾಯಕರು ಸರ್ಕಾರದ ನಡೆ ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್, ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು? ಈ ಸರ್ಕಾರಕ್ಕೆ ಅರಳು ಮರಳೋ? ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ? ಅರ್ಥವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Home add -Advt

Related Articles

Back to top button