Kannada NewsKarnataka NewsLatestPolitics

*BREAKING: ಜಾತ್ರೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ದೇವಿಯ ದರ್ಶನಕ್ಕೆಂದು ಬಂದಿದ್ದರು. ಈ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರ ಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ತೊಂದರೆ, ಮಧುಮೇಹ ಸಮಸ್ಯೆಯಿಂದಾಗಿ ಕಾಗೋಡು ತಿಮ್ಮಪ್ಪ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ವೈದ್ಯ ಡಾ.ವಿಕ್ರಮ್ ಅವರಿಂದ ಚಿಕಿತ್ಸೆ ನೀಡಲಾಗಿದೆ. ಸದ್ಯ ಕಾಗೋಡು ತಿಮ್ಮಪ್ಪ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button