Latest

ಅನುಷ್ಕಾ-ವಿರಾಟ್ ದಂಪತಿಗೆ ಹೆಣ್ಣು ಮಗು ಜನನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಅಭಿಮಾನಿಗಳು, ಸೆಲೆಬ್ರಿಟಿಗಳು ವಿರುಷ್ಕಾ ದಂಪತಿಗೆ ಶುಭಾಷಯ ಕೋರಿದ್ದಾರೆ.

ಈ ಕುರಿತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಜಿಕ ಜಾಲತಾಣಗಳಲ್ಲಿ ಖುಷಿ ಹಂಚಿಕೊಂಡಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಗಿ ತಿಳಿಸಿದ್ದಾರೆ.

ತಾಯಿ ಹಾಗೂ ಮಗು ಆರೋಗ್ಯದಿಂದ ಇದ್ದು, ಅಭಿಮಾನಿಗಳು ಶುಭಾಷಯಗಳ ಸುರಿಮಳೆಗೈದಿದ್ದಾರೆ.

Related Articles

Back to top button