
ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ಇದೇ ವೇಳೆ ಎರಡು ಕಟ್ಟಡಗಳು ಕೂಡ ಬೆಂಕಿಗಾಹುತಿಯಾಗಿವೆ. ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಅಹಮದಾಬಾದ್‌ನಲ್ಲಿ ಸಂಭವಿಸಿದ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಈ ದುಃಖದ ಸಮಯದಲ್ಲಿ, ಅದರಿಂದ ಬಾಧಿತರಾದ ಪ್ರತಿಯೊಬ್ಬರೊಂದಿಗೂ ನನ್ನ ಆಲೋಚನೆಗಳು ಇವೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




