Kannada NewsKarnataka NewsLatest

*ಡ್ರೋಣ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ಪ್ರಯಾಗ್ ಡ್ರೋಣ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿದ್ದಾರೆ.

Home add -Advt

ಕೋವಿಡ್ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್ ಸಮಸೆ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋಣ್ ಪ್ರತಾಪ್, ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದರು.

ಅಧಿಕಾರಿಯೊಬ್ಬರು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದು, ಮೆಂಟಲಿ ಅನ್ ಸ್ಟೇಬಲ್ ಅಂತಾ ಸಹಿ ಹಾಕುವಂತೆ ತಲೆಗೆ ಹೊಡೆದು ಕಿರುಕುಳ ನೀಡಿದ್ದಾಗಿ ಹೇಳಿದ್ದರು. ಕ್ವಾರಂಟೈನ್ ಸಂದರ್ಭದಲ್ಲಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಿದ್ದರು.

ಈ ಪ್ರಕರಣ ಸಂಬಂಧ ಇದೀಗ ಬಿಬಿಎಂಪಿ ಅಧಿಕಾರಿ ಪ್ರಯಾಗ್, ಪ್ರತಾಪ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ್ದರಿಂದ ನಾನೇ ಕೇಸ್ ದಾಖಲಿಸಿದ್ದೆ. ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಪ್ರತಾಪ್ ಗೆ ಯಾವುದೆ ಮಾನಸಿಕ ಕಿರುಕುಳ ಕೊಟ್ಟಿಲ್ಲ, ತಲೆಗೂ ಹೊಡೆದಿಲ್ಲ. ಆತ ಸುಳ್ಳು ಹೇಳಿಕೆ ನೀಡುತ್ತಿದ್ದಾನೆ. ಅನಗತ್ಯ ಆರೋಪ ಮಾಡುತ್ತಿದ್ದಾನೆ. ಪ್ರತಾಪ್ ವಿರುದ್ಧ 49 ಲಕ್ಷ ರೂ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ.

ಅಲ್ಲದೇ ಚಾನಲ್ ವಿರುದ್ಧವೂ 2ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


Related Articles

Back to top button