Latest

ರೇವ್ ಪಾರ್ಟಿ; ವಿದ್ಯಾರ್ಥಿಗಳು ಸೇರಿ 14 ಜನರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಆನೇಕಲ್ ನಲ್ಲಿ ತಡರಾತ್ರಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಸೇರಿದಂತೆ 14 ಜನರನ್ನು ಬಂಧಿಸಿದ್ದಾರೆ.

ಪೊಲೀಸರ ದಾಳಿ ವೇಳೆ ವಿದ್ಯಾರ್ಥಿಗಳು ಡ್ರಗ್ಸ್ ನಶೆಯಲ್ಲಿದ್ದರು ಎನ್ನಲಾಗಿದೆ. ದಾಳಿ ವೇಳೆ ಗಾಂಜಾ, ಮರಿಜುವಾನ ಸೇರಿದಂತೆ ಹಲವು ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Home add -Advt

ಆನೇಕಲ್ ನ ಖಾಸಗಿ ರೆಸಾರ್ಟ್ ಒಂದರ ನಿರ್ಜನ ಪ್ರದೇಶದಲ್ಲಿ ರೇವ್ ಪಾರ್ಟಿ ನಡೆದಿತ್ತು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಹಲವರು ಎದ್ದುಬಿದ್ದು ಓಡಿಹೋಗಿದ್ದಾರೆ. ಡ್ರಗ್ಸ್ ಸೇವಿಸಿ ನಶೆಯಲ್ಲಿದ್ದ 14 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ಯಾಬ್ ಚಾಲಕನೊಂದಿಗೆ ಅಶ್ಲೀಲವಾಗಿ ವರ್ತನೆ, ವಿಕೃತಿ ಮೆರೆದ ಯುವತಿಯರು

Related Articles

Back to top button